ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಾಗೂ ನೌಕರರ ಎಲ್ಲಾ ವೃಂದದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ಜಿಲ್ಲಾ ಸಮಿತಿ ಇವರ ನೇತೃತ್ವದಲ್ಲಿ ಆರ್.ಡಿ.ಪಿ.ಆರ್ ಕುಟುಂಬದ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆ ಕುರಿತು ಇಂದು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೆಳಕಂಡ ಬೇಡಿಕೆಗಳ ಕುರಿತು ಮನವಿ ಪತ್ರ ಸ್ವೀಕರಿಸಲಾಯಿತು.
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅರಣ್ಯ ಹಾಗೂ ಜೀವಿಶಾಸ್ತ್ರ ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರ ಅಧ್ಯಕ್ಷತೆಯಲ್ಲಿ, ಚಿಕ್ಕಮಗಳೂರು ಅರಣ್ಯ ಇಲಾಖೆ ವಿಭಾಗದಿಂದ ಹಮ್ಮಿಕೊಂಡಿದ್ದ ಭದ್ರಾ ಹುಲಿ ಸಂರಕ್ಷಣಾ ಪ್ರದೇಶದ ರಜತ ಮಹೋತ್ಸವ ಸಂಭ್ರಮದಲ್ಲಿ ಭಾಗಿಯಾದ ಕ್ಷಣ.
ಕರ್ನಾಟಕ ಪ್ರದೇಶ ಜನತಾದಳ (ಜಾ) ಅಧ್ಯಕ್ಷರು, ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವರಾದ ಶ್ರೀ H D Kumaraswamy ರವರ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳುಮಟ್ಟದ ಪದ ಬಳಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ್ ಎಂ. ರವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ಶ್ರೀ V Somanna ರವರು ತಾಲ್ಲೂಕಿನ ಕೋಟೆಗಂಗೂರು ಬಳಿ ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಅಭಿವೃದ್ಧಿ ಪಡಿಸುತ್ತಿರುವ "ರೈಲ್ವೇ ಕೋಚಿಂಗ್ ಡಿಪೋ" ನಿರ್ಮಾಣ ಹಂತದ ಕಾಮಗಾರಿಯ ಪರಿಶೀಲನೆ ನಡೆಸಿ, ರೈಲ್ವೆ ಕಾಮಗಾರಿ ಮತ್ತು ಅಭಿವೃದ್ಧಿಯ ಬಗ್ಗೆ ಸಂಬಂಧ ಪಟ್ಟ ರೈಲ್ವೇ ಅಧಿಕಾರಿಗಳೊಂದಿಗೆ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ ಸೂಕ್ತ ಅನುಕೂಲ ಮಾಡುವಂತೆ ನಡೆಸಿದ ಸಭೆಯಲ್ಲಿ ಭಾಗಿಯಾದ ಕ್ಷಣ.
ಶಿವಮೊಗ್ಗದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ ಶಿವಮೊಗ್ಗ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಕಾರಣೀಕರ್ತರಾದ ಪೌರಕಾರ್ಮಿಕರಿಗೆ ಶುಭಕೋರಲಾಯಿತು.
ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇವರ ಸಂಘದ ನೂತನ ಕಚೇರಿ ಕಟ್ಟಡ ಹಾಗೂ ಗೋದಾಮು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಉದ್ಘಾಟನೆ ನೆರವೇರಿಸಿದ ಕ್ಷಣ.
MADB ಕಚೇರಿಯಲ್ಲಿ ನಡೆದ ಮಲೆನಾಡು ಪ್ರದೇಶ ಅಭಿವೃದ್ಧಿಯ ಮಂಡಳಿಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಮಲೆನಾಡು ಪ್ರಾದೇಶಿಕ ಮಂಡಳಿಯ ಅಧ್ಯಕ್ಷರಿಗೆ ಮನವಿಯನ್ನು ಸಲ್ಲಿಸಲಾಯಿತು.
ಇಟ್ಟಿಗೆ ಹಳ್ಳಿ, ಅನವೇರಿ, ಗುಡುಮಘಟ್ಟ ಸುತ್ತಮುತ್ತಲಿನ ಗ್ರಾಮಸ್ಥರು ಸಾಗುವಳಿ ಮಾಡುತ್ತಿದ್ದ ಜಮೀನನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಗ್ರಾಮಸ್ಥರ ಮನವಿ ಮೇರಿಗೆ ಇಂದು ಜಿಲ್ಲಾಧಿಕಾರಿಗಳನ್ನು ಗ್ರಾಮಸ್ಥರೊಂದಿಗೆ ಭೇಟಿ ಮಾಡಿ ಜಮೀನು ತೆರವು ಗೊಳಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.