ಕುಂಸಿ ಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿದ ಕ್ಷಣ, ಹಾಗು ಕನ್ನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕ್ರೀಡಾ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಸನ್ಮಾನಿಸಲಾಯಿತು.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಭೆಯನ್ನು ಕರೆದು ಗ್ರಾಮಠಾಣ ಮತ್ತು ನೀರಿನ ಸಮಸ್ಯೆಗಳ ಕುರಿತು ಸಭೆಯನ್ನು ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯಿಂದ ಗೆಜ್ಜೇನಹಳ್ಳಿಯಲ್ಲಿ, ಕಾಲುಬಾಯಿ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲುಬಾಯಿ ರೋಗದ ಕುರಿತು ಅನ್ನದಾತರಿಗೆ ಅರಿವು ಮೂಡಿಸಿದ ಸಂದರ್ಭ.
ಶಿವಮೊಗ್ಗದ ವಿನೋಬನಗರದ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಜೊತೆ ಶಾಲೆಯ ಕುಂದುಕೊರತೆಗಳ ಸಭೆ ನಡೆಸಲಾಯಿತು. ಈ ವೇಳೆ ಎಂಎಲ್‌ಸಿ ಭೋಜೇಗೌಡ ಅವರು ಇದ್ದರು. ಸಭೆಯಲ್ಲಿ ಪಾಲ್ಗೊಂಡು, ಶಾಲೆಯ ಕುಂದುಕೊರತೆಗಳನ್ನು ಆಲಿಸಲಾಯಿತು.