ಶರಣ ಶ್ರೀ ಎಂ.ಎಸ್. ಮಹೇಂದ್ರನಾಥ್ ಅವರ ಶಿವಗಣಾರಾಧನೆ ಮತ್ತು ಧರ್ಮಸಭೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹೊಳಲೂರಿನಲ್ಲಿ ನಡೆಯಿತು. ಬೆಕ್ಕಿನಕಲ್ಮಠದ ಶ್ರೀಗಳು ಉಪಸ್ಥಿತರಿದ್ದರು. ಈ ಧರ್ಮಸಭೆಯಲ್ಲಿ ಪಾಲ್ಗೊಂಡು, ಶರಣ ಶ್ರೀ ಎಂ.ಎಸ್. ಮಹೇಂದ್ರನಾಥ್ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು.
ಆಯನೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಆಸ್ಪತ್ರೆಯ ಸಮಸ್ಯೆಯನ್ನು ತಿಳಿದು, ಡಿಹೆಚ್ಒ ಹಾಗೂ ಟಿಹೆಚ್ಒ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಕೂಡಲೇ ಸರಿಪಡಿಸುವಂತೆ ಹಾಗೂ ಹೆಚ್ಚುವರಿ ಖಾಲಿ ಇರುವ ಸ್ಥಾನಕ್ಕೆ ವೈದ್ಯರುಗಳನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಯಿತು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ಕರೆಂಟ್ ಕೈಕೊಡುತ್ತಿದ್ದು, ರೈತರು ಹೊಳಲೂರಿನ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ, ರೈತರ ಸಮಸ್ಯೆ ಆಲಿಸಲಾಯಿತು. ಕೂಡಲೇ ವಿದ್ಯುತ್ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಸೂಚಿಸಲಾಯಿತು.
ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ರೈತ ಮಾಹಿತಿ ಕೇಂದ್ರ ಮತ್ತು ತಾಂತ್ರಿಕ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು, ಉದ್ಘಾಟನೆ ನೆರವೇರಿಸಿದ ಸಂದರ್ಭ.
ಹೊಳೆಹೊನ್ನೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದ ಸಂದರ್ಭ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಆಯನೂರಿನಲ್ಲಿ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯ್ತು. ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳಿಂದ ಕುಂದು ಕೊರತೆಗಳ ಮಾಹಿತಿ ಪಡೆದಕೊಂಡ ಸಂದರ್ಭ.