ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಯಶೋದಮ್ಮ ನವರ ಕುಟುಂಬಕ್ಕೆ, ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಯ್ತು. ಮೃತರ ತಾಯಿ ಚಂದ್ರಮ್ಮನವರಿಗೆ ಪರಿಹಾರದ ಚೆಕ್ ವಿತರಣೆ ಮಾಡಿ, ಸಾಂತ್ವನ ಹೇಳಲಾಯಿತು. ಈ ವೇಳೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಸಂತೇಕಡೂರು ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ ಹಾಗೂ ಗೃಹ ಜ್ಯೋತಿ ಯೋಜನೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭ
ಅರಕೆರೆ ಗ್ರಾಮ ಪಂಚಾಯ್ತಿಯಲ್ಲಿ ಅಭಿನಂದನೆ ಸ್ವೀಕರಿಸಿದ ಸಂದರ್ಭ. ಇದೇ ವೇಳೆ ಗ್ರಾಮೀಣ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ 12 ಜನ ವಿಕಲಚೇತರಿಗೆ ಟೈಲರಿಂಗ್ ಮಷೀನ್ ನೀಡಲಾಯಿತು.
ಕುಂಸಿಯ ಸ್ವಾತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಸಂದರ್ಭ