to
Posted on 05/09/2024

ಶಿವಮೊಗ್ಗ ಸಮೀಪದ ಮಾಚೇನಹಳ್ಳಿ ಎನ್ ಯು ಆಸ್ಪತ್ರೆಯಲ್ಲಿ ಕಿಡ್ನಿ ಕಸಿಯ ಮೊದಲ ವಾರ್ಷಿಕೋತ್ಸವ ಹಾಗೂ ಕಿಡ್ನಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರು, ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷರು, ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು @hd_kumaraswamy ರವರೊಂದಿಗೆ ಪಾಲ್ಗೊಳ್ಳಲಾಯಿತು.

Posted on 02/09/2024

ಕೇಂದ್ರ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರು, ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷರು, ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಆದ H D Kumaraswamy ಅವರು ಸೆಪ್ಟೆಂಬರ್ 05ನೇ ತಾರೀಕು ಶಿವಮೊಗ್ಗ ಆಗಮಿಸಲಿದ್ದು. ಇದರ ಸಲುವಾಗಿ ಇಂದು ಶಿವಮೊಗ್ಗ ಜಿಲ್ಲಾ ಜನತಾದಳ (ಜಾತ್ಯತೀತ) ಕಾರ್ಯಾಲಯದಲ್ಲಿ ಜಿಲ್ಲಾ ಜನತಾದಳ ಶಿವಮೊಗ್ಗದ ಜಿಲ್ಲಾಧ್ಯಕ್ಷರಾದ ಡಾ. ಕಡಿದಾಳ್ ಗೋಪಾಲ್ ರವರು ಮತ್ತು JDS ರಾಜ್ಯ ಕೋರ್ ಕಮಿಟಿ ಸದಸ್ಯರು, ಶಿವಮೊಗ್ಗದ ಮಾಜಿ ಶಾಸಕರಾದ ಪ್ರಸನ್ನ ಕುಮಾರವರ ಮತ್ತು ಪಕ್ಷದ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

Posted on 31/08/2024

ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ವಿಭಾಗದಿಂದ ನಾಗತಿಬೆಳಗಲು ಶ್ರೀ ನಂಜುಂಡೇಶ್ವರ ದೇವಸ್ಥಾನ ಆವರಣದಲ್ಲಿ ನಡೆದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32ನೇ ಶ್ರದ್ಧಾಂಜಲಿ ಸಮಾರಂಭದ ದಾಸೋಹ “ಭಕ್ತಿ ಸಮರ್ಪಣೆ” ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.

Posted on 31/08/2024

ಶಿವಮೊಗ್ಗದ ವಿನೋಭನಗರದಲ್ಲಿರುವ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಶಿವಮೊಗ್ಗ-ಭದ್ರಾವತಿ ಅರ್ಬನ್ ಡೆವೆಲಪಮೆಂಟ್ ನ ಬಗ್ಗೆ ಸಭೆ ನಡೆಸಲಾಯಿತು.

Posted on 29/08/2024

ಶಿವಮೊಗ್ಗ ತಾಲೂಕಿನ ವಾಗ್ದೇವಿ ಹಿರಿಯ ಪ್ರಾಥಮಿಕ ಶಾಲೆ ತಮ್ಮಡಿಹಳ್ಳಿಯಲ್ಲಿ ನಡೆದ ಸಿರಿಗೆರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.

Posted on 28/08/2024

ಶಿವಮೊಗ್ಗ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಚೇನಹಳ್ಳಿಯಲ್ಲಿ ನಡೆದ ಕೊಮ್ಮನಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.

Posted on 27/08/2024

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟ್ಟಿಗೆಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅನವೇರಿ, ಮೈದೊಳಲು ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.

Posted on 27/08/2024

ಭದ್ರಾವತಿ ತಾಲೂಕಿನ ಯಡೇಹಳ್ಳಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶರಾವತಿ ವಲಯಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.

Posted on 26/08/2024

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.