ಶಿವಮೊಗ್ಗ ತಾಲೂಕಿನ ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ARS ಪೂರ್ವಭಾವಿ ವಾರ್ಷಿಕ ಸಭೆ ನಡೆಸಲಾಯಿತು.
ಜಿಲ್ಲಾಡಳಿತ ಶಿವಮೊಗ್ಗ ಹಾಗು ಪಟ್ಟಣ ಪಂಚಾಯಿತಿ ಹೊಳೆಹೊನ್ನೂರು ಇವರ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಶಿವಮೊಗ್ಗದ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಗಿಡ ನೆಡಯುವ ಕಾರ್ಯಕ್ರಮ ನಡೆಸಿಕೊಡಲಾಯಿತು.
ನಮ್ಮ ಶಿವಮೊಗ್ಗ ಜಿಲ್ಲೆಯ ಉಕ್ಕಿನ ನಗರಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇಂದು ಕಾರ್ಖಾನೆಯ ಆವರಣದ ಕಚೇರಿಯಲ್ಲಿ ಆಯೋಜಿಸಿದ್ದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರು, ಜೆಡಿಎಸ್ ವರಿಷ್ಠರು ಹಾಗು ಮಾಜಿ ಮುಖ್ಯಮಂತ್ರಿಗಳು ಆದ ಸನ್ಮಾನ್ಯ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅಣ್ಣನವರು ಹಾಗೂ ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅಮರೆಂದು ಪ್ರಕಾಶ್ ಅವರೊಂದಿಗೆ ಸಭೆಯಲ್ಲಿ ಭಾಗಿಯಾದ ಸಂದರ್ಭ.
ಶಿವಮೊಗ್ಗ ತಾಲ್ಲೂಕು ಸೂಗೂರು ಗ್ರಾಮದಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನೂತನ "ಶ್ರೀ ಮೃಡ ಬಸವೇಶ್ವರ ದೇವಸ್ಥಾನದ ಗೋಪುರ ಕಲ್ಲಿನ ಪೂಜೆ ಹಾಗೂ ಸಮುದಾಯ ಭವನದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣ.
ಶಿವಮೊಗ್ಗದ ವಿನೋಭನಗರದಲ್ಲಿರುವ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಶಿವಮೊಗ್ಗ-ಭದ್ರಾವತಿ ಅರ್ಬನ್ ಡೆವೆಲಪಮೆಂಟ್ ನ ಬಗ್ಗೆ ಸಭೆ ನಡೆಸಲಾಯಿತು.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆ.ಡಿ.ಪಿ) ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು. ಮತ್ತು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯ ಭಗೀರಥ ವೃತ್ತದಲ್ಲಿ ನೂತನ ಬಸ್ ಸ್ಟಾಂಡ್ ಹಾಗೂ ನೃಪತುಂಗ ವೃತ್ತದ ಭದ್ರಾವತಿ ರಸ್ತೆಯ ಗುದ್ದಲಿ ಪೂಜಾ ಕಾರ್ಯಕ್ರಮ ನೆರವೇರಿಸಿದ ಕ್ಷಣ. ಈ ಸಮಯದಲ್ಲಿ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.
ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ತಾಲೂಕಿನ ಕಡು ಬಡವರಿಗೆ 50% ವರೆಗಿನ ಸಾಲ ಮತ್ತು 50% ವರೆಗಿನ ಸಹಾಯಧನ ನೀಡಲಾಯಿತು.
ಭದ್ರಾವತಿ ತಾಲೂಕಿನ ತಿಮ್ಲಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ತರಗತಿ ಕೊಠಡಿಯ ಉದ್ಘಾಟನೆ ನೆರವೇರಿಸಿದ ಕ್ಷಣ. ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿ ವರ್ಗದವರು, SDMC ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.